ರೈತರ ಮನೆ ಬಾಗಿಲಿಗೆ ಆಸ್ತಿ ದಾಖಲೆ : ಸಚಿವ ಆರ್. ಅಶೋಕ್
ಬೆಂಗಳೂರು: ರೈತರ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಕಂದಾಯ ಸಚಿವ ಆರ್ ಅಶೋಕ್, ಗಿರಿಜಮ್ಮ, ಮುನಿಯಪ್ಪ ದಂಪತಿ ಮನೆಯಲ್ಲಿ ಉಪಹಾರ ಸೇವಿಸಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ರೈತ ಕುಟುಂಬಗಳು ತಮ್ಮ ಆಸ್ತಿ ಭಾಗ ಮಾಡಿಕೊಳ್ಳುವುದು ಸವಾಲಿನ ಕೆಲಸವಾಗಿತ್ತು. ಪೌತಿಖಾತೆ ಆಂದೋಲನದ ಮೂಲಕ ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳು ಬರುತ್ತಿವೆ.
ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳನ್ನು ತಲುಪಿಸುವ ಮಹತ್ವದ ಸುಧಾರಣೆ ಕ್ರಮವನ್ನು ರಾಜ್ಯ ಸರ್ಕಾರ ತಂದಿದೆ ಎಂದು ಹೇಳಿದ್ದಾರೆ