ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ; ಐವರಿಗೆ ಗಂಭೀರ ಗಾಯ.!
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ.
ಈ ಅವಘಡದಲ್ಲಿ ಐದು ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನೂತನವಾಗಿ ಬಾಯ್ಲರ್ ಸ್ಥಾಪನೆ ಮಾಡಲಾಗಿತ್ತು. ನೂತನ ಬಾಯ್ಲರ್ನನ್ನು ಪ್ರಾಯೋಗಿಕವಾಗಿ ಪರೀಕ್ಷೆ ಮಾಡುವ ವೇಳೆ ಈ ಅವಘಡ ನಡೆದಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.