ವಿಶ್ವಮಹಿಳಾ ದಿನದಂದೇ ಜಿಲ್ಲಾಧಿಕಾರಿ ಕಛೇರಿ ಎದುರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಜನತಾ ಪ್ಲ್ಯಾಟ್ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಜೊತೆಗೆ ಮಕ್ಕಳಾದ ಸೃಷ್ಟಿ, ಸಾಕ್ಷಿ ಸಾನ್ವಿ ಫಿನೈಲ್ ಕುಡಿಸಿದ್ದಾಳೆ.
ಕಳೆದ ಹಲವು ವರ್ಷಗಳಿಂದ ಪತಿಯ ಜೊತೆಗೆ ಬೆಳಗಾವಿಯ ಅನಗೋಳದ ಬಾಡಿಗೆ ಮನೆಯಲ್ಲಿ ವಾಸವಿದ್ದ ಸರಸ್ವತಿ, ಅನಗೋಳದ ಸಲೂನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಅದೃಶ್ಯಪ್ಪ ಹಂಪಣ್ಣನವ, ಕೈತುಂಬ ಸಾಲ ಮಾಡಿ 15 ದಿನಗಳ ಹಿಂದೆಯೇ ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ಹೋಗಿರುವುದರಿಂದ ತುತ್ತು ಅನ್ನಕ್ಕೂ ಗತಿಯಿಲ್ಲದೇ ಜಿಲ್ಲಾಧಿಕಾರಿ ಭೇಟಿಗಾಗಿ ಡಿಸಿ ಕಚೇರಿಗೆ ಮಕ್ಕಳ ಜೊತೆಗೆ ಆಗಮಿಸಿದ್ದ ಸರಸ್ವತಿ. ಆ ವೇಳೆ ಮಹಿಳೆಯನ್ನು ವಿಚಾರಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ , ಜ್ಯೂಸ್ ಎಂದು ನನ್ನ ತಾಯಿ ಏನೋ ಕುಡಿಸಿದ್ದಾಳೆಂದು ಸಿಬ್ಬಂದಿ ಎದುರು ಹೇಳಿರುವ ಹಿರಿಯ ಪುತ್ರಿ ಸೃಷ್ಟಿ ಆಗ ಸರಸ್ವತಿ ಹಾಗೂ ಮೂವರು ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದಕ್ಕೆ ಅಲರ್ಟ್ ಆದ ಡಿಸಿ ಕಚೇರಿ ಸಿಬ್ಬಂದಿ, ತಕ್ಷಣವೇ ಡಿಸಿ ಕಚೇರಿ ಬಳಿಯ ಪೊಲೀಸರ ನೆರವು ಪಡೆದು ಜಿಲ್ಲಾಸ್ಪತ್ರೆಗೆ ಅಸ್ವಸ್ಥರು ಶಿಫ್ಟ್ ಮಾಡಿದರು.
ಸದ್ಯ ಸರಸ್ವತಿ ಹಾಗೂ ಮೂವರು ಹೆಣ್ಣು ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ, ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.