ಅಥಣಿ ಚುನಾವಣಾ ಕಣಕ್ಕೆ ಎಂಟ್ರಿ ಕೊಟ್ಟ ಇಂಚಗೇರಿ ಸಂಪ್ರದಾಯದ ಸನ್ಯಾಸಿ ; ಜನಸೇವೆ ಉತ್ತಮಗೊಳಿಸಲು ರಾಜಕೀಯ ಅವಶ್ಯಕ
ಬೆಳಗಾವಿ : ಬರುವ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಅಥಣಿ ಮತ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಸಿದ್ಧತೆ ಮಾಡಿಕೊಂಡಿದ್ದೇನೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿಉ ಸೇನೆ ರಾಜ್ಯ ಗೌರವಾಧ್ಯಕ್ಷರಾದ ಶಶಿಕಾಂತ ಗುರುಗಳು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳೆದ ನಾಲ್ಕು ವರ್ಷಗಳಿಂದ ಅಥಣಿಯಲ್ಲಿ ಸಾಕಷ್ಟು ಸಮಾಜ ಸೇವೆ ಮಾಡಿಕೊಂಡು ಬಂದಿದ್ದೇನೆ. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಕಡಿವಾಣ ಹಾಕುವ ಪ್ರಯತ್ನ ಮಾಡುವೆ. ಒಂದು ವೇಳೆ ಕಾಂಗ್ರೆಸ್ ಟಿಕೆಟ್ ನೀಡದ ಪಕ್ಷದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದರು.
ಅಥಣಿ ತಾಲೂಕನ್ನು ಮಾದರಿ ಕ್ಷೇತ್ರ ಮಾಡುವ ಗುರಿ ಹೊಂದಿದ್ದೇನೆ. ನಾನು ಸನ್ಯಾಸಿ, ನನ್ನ ಬಳಿ ಹಣ ಇಲ್ಲ. ಜನ ಬೆಂಬಲ ಸಾಕಷ್ಟು ಇದೆ. ಕಾಂಗ್ರೆಸ್ ಟಿಕೆಟ್ ನೀಡದಿದ್ದರೂ ಪಕ್ಷೇತರವಾಗಿ ಚುನಾವಣೆ ಸ್ಪರ್ಧೆ ಮಾಡುತ್ತಿದ್ದೇನೆ. ಈ ಕುರಿತು ನನ್ನ ಅಭಿಮಾನಿಗಳು ಹಾಗೂ ರೈತ ಸಂಘಟನೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದರು.
ಮಲ್ಲಣ್ಣ ರಾಮದುರ್ಗ, ರವಿ ಸಿದ್ಧಣ್ಣವರ, ರಾಘವೇಂದ್ರ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.