ಸ್ನಾತಕೋತ್ತರ ಪದವಿ: ಶುಭಾ ಹತ್ತಳ್ಳಿ ಗೆ ಚಿನ್ನದ ಪದಕ
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ತೊರವಿ ಫ.ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗದಕ್ಕೆ ಮೊದಲ ರ್ಯಾಂಕ್ ಪಡೆದ ಶುಭಾ ಹತ್ತಳ್ಳಿ ಅವರಿಗೆ ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಹಾಗೂ ಪದವಿ ಪ್ರಧಾನ ಮಾಡಲಾಯಿತು.
ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ (ಮಾ.20) ನಡೆದ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ 11 ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದವಿ ಪ್ರಧಾನ ಮಾಡಲಾಯಿತು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರಗೌಡ, ಮೌಲ್ಯಮಾಪನ ಕುಲಸಚಿವರಾದ ಶಿವಾನಂದ ಗೊರನಾಳೆ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.