ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ ಮಾಜಿ ಸಚಿವ ಹಾಗು ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ.
ಶಿವಮೊಗ್ಗದ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಹೀಗಾಗಿ ನನಗೆ ಯಾವ ಕ್ಷೇತ್ರದಿಂದಲೂ ಟಿಕೇಟ್ ಕೊಡಬೇಡಿ ಎಂದು ಬಿಜೆಪಿ ಶಾಸಕ ಈಶ್ವರಪ್ಪ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಂದ ಹಾಗೆ ಈ ಬಾರಿ ತಮ್ಮ ಪುತ್ರ ಕಾಂತೇಶ್ ಗೆ ಶಿವಮೊಗ್ಗ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸೋ ಕಸರತ್ತನ್ನು ತೆರೆ ಮರೆಯಲ್ಲಿ ನಡೆಸುತ್ತಿದ್ದರು.ಈ ಬೆನ್ನಲ್ಲೇ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.