ಕೊಪ್ಪಳ : ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ 9/4/2023 ರಂದು 63-ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಎನ್.ಜರಕುಂಟಿ ಗ್ರಾಮದಲ್ಲಿ ಯಾವುದೇ ಅನುಮತಿ ಇಲ್ಲದೇ ತಡರಾತ್ರಿ 250 ಜನರಿಗೆ ಬಾಡೂಟ ಮಾಡಿಸುತ್ತಿದ್ದ ಸ್ಥಳದ ಮೇಲೆ ಮಾದರಿ ನೀತಿ ಸಂಹಿತೆ ಅಧಿಕಾರಿಗಳು ಮತ್ತು ಎಫ್ಎಸ್ಟಿ ತಂಡದ ಅಧಿಕಾರಿಗಳು ದಾಳಿ ನಡೆಸಿ, 7430 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಯಲಬುರ್ಗಾ ತಾಲೂಕಿನ ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್.ಜರಕುಂಟಿ ಗ್ರಾಮದ ಶರಣಗೌಡ ಹನುಮಗೌಡ ಪೊಲೀಸ್ ಪಾಟೀಲ್(55) ಇವರು ತಮ್ಮ ಅಭ್ಯರ್ಥಿಗೆ ಮತ ಹಾಕುವಂತೆ ಆಮಿಷವೊಡ್ಡಿ ತಮ್ಮ ಜಮೀನಿನಲ್ಲಿ 250 ಜನರಿಗೆ ಬಾಡೂಟದ ವ್ಯವಸ್ಥೆ ಮಾಡುತ್ತಿರುವುದಾಗಿ ಮಾಹಿತಿ ಪಡೆದ ತಹಶೀಲ್ದಾರ್ ಯಲಬುರ್ಗಾ, ಮಾದರಿ ನೀತಿ ಸಂಹಿತೆ ಅಧಿಕಾರಿಗಳು ಮತ್ತು ಎಫ್ಎಸ್ಟಿ ತಂಡದ ಅಧಿಕಾರಿಗಳು, ಬೇವೂರ ಪಿಎಸ್ಐ ಹಾಗೂ ಅವರ ತಂಡದೊಂದಿಗೆ ದಿಢೀರ್ ದಾಳಿ ನಡೆಸಿ ಸ್ಥಳದಲ್ಲಿದ್ದ 7430 ರೂಪಾಯಿ ಮೌಲ್ಯದ, ಅಡುಗೆ ಪಾತ್ರೆ, ಅಕ್ಕಿ ಮುಂತಾದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.