ವಾಲಿಬಾಲ್ ಕ್ರೀಡಾಪಟುಗಳಿಗೆ ನೆರವಾದ ಕಾರ್ಮಿಕ ಸಚಿವ ಸಂತೋಷ್ ಲಾಡ್
ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವ್ಯವಸ್ಥೆ ಮಾಡಿದ್ದಾರೆ.
ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಕಲ್ಕತ್ತಾದಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ, ಊಟದ ವ್ಯವಸ್ಥೆಯನ್ನು ಮಾಡಿದ್ದಾರೆ.