ಬೆಂಗಳೂರಿನಿಂದ ಧಾರವಾಡಕ್ಕೆ ಸಕ್ಸಸ್ ಆಗಿ ಬಂದ ಹೊಸ ರೈಲು
ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.
ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಟ್ರಯಲ್ ರನ್ ಆರಂಭಿಸಿ ಪ್ರಯಾಣವನ್ನು ಯಶಸ್ವಿಯಾಗಿ ಪೂರೈಸಿದೆ.
ಬೆಳಗ್ಗೆ 5:45 ಕ್ಕೆ ಬೆಂಗಳೂರಿನಿಂದ ಹೊರಟಿದ್ದ ವಂದೇ ಭಾರತ್ ರೈಲು 12:10ಕ್ಕೆ ಧಾರವಾಡವನ್ನು
ತಲುಪಿದೆ.
ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ಎಲ್ಲ ಬಗೆಯ ಪರೀಕ್ಷೆಗಳು ಯಶಸ್ವಿಯಾಗಿವೆ ಎಂದು ನೈರುತ್ಯ ರೇಲ್ವೆಯ ಜನರಲ್ ಮ್ಯಾನೇಜರ್ ಧಾರವಾಡದಲ್ಲಿ ಸಂಜೀವ್ ಕಿಶೋರ್ ಖಚಿತಪಡಿಸಿದ್ದಾರೆ.
ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಹುಬ್ಬಳ್ಳಿ ವಂದೇ ಭಾರತ್ ರೈಲು ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ಮಾತ್ರ ನಿಲ್ಲಲಿದೆ ಎಂದು ವರದಿಯಾಗಿದೆ.
ಜೂನ್ 26ರಂದು ಬೆಂಗಳೂರು ಹುಬ್ಬಳ್ಳಿ ವಂದೇ ಭಾರತ್ ರೈಲು ಸಾರ್ವಜನಿಕರ ಸೇವೆಗೆ ಆರಂಭವಾಗಲಿದೆ. ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ.
ಜೊತೆಗೆ ಜೂನ್ 26ರಂದು ಮುಂಬೈ-ಗೋವಾ, ಭೋಪಾಲ್-ಇಂಧೋರ್, ಪಾಟ್ನಾ-ರಾಂಚಿ, ಭೋಪಾಲ್-ಜಬಲ್ಪುರ ವಂದೇ ಭಾರತ್ ರೈಲುಗಳು ಸಹ ಆರಂಭವಾಗಲಿವೆ.