ಉತ್ತರ ಕರ್ನಾಟಕದ ಪ್ರಮುಖ ಬೇಡಿಕೆಗಳಿಗೆ ಆಗ್ರಹಿಸಿ ಡಿ.5ರಂದು ಪ್ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪ್ರತಿಭಟನೆ..!
ಬೆಳಗಾವಿ: ಡಿ. 4ರಿಂದ ಆರಂಭ ಆಗುವ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಕೃಷಿ, ನೀರಾವರಿ, ಶಿಕ್ಷಣ, ಆರೋಗ್ಯ,ಉದ್ಯಮ ವಿಷಯ ಪ್ರಸ್ತಾಪ ಜತೆಗೆ ಉತ್ತರ ಕರ್ನಾಟಕದ ಪ್ರಮುಖ ಬೇಡಿಕೆಗಳಿಗೆ ಆಗ್ರಹಿಸಿ ಡಿ.5ರಂದು ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯನ್ನ 2ನೇ ರಾಜ್ಯಧಾನಿಯನ್ನಾಗಿ ಘೋಷಣೆ ಮಾಡಬೇಕು.ಸುವರ್ಣ ಸೌಧಕ್ಕೆ ಕಚೇರಿ ಸ್ಥಳಾಂತರ ಮಾಡಬೇಕು.ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು.ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳಿಗೆ ಸಮಾನ ರಾಜಕೀಯ ಪ್ರಾತಿನಿಧ್ಯ ಸಿಗಬೇಕೆಂದು ಹೋರಾಟ ಮಾಡಲಾಗುತ್ತದೆ ಎಂದು ಆಗ್ರಹಿಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಧರಣಿ ನಡೆಸಲಾಗುತ್ತದೆ. ಸ್ವಾಮೀಜಿಗಳ ನೇತೃತ್ವದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಯಲಿದ್ದು ಉತ್ತರ ಕರ್ನಾಟಕಕ್ಕೆ ಎಲ್ಲ ಸರ್ಕಾರಗಳು ನಿರಂತರವಾಗಿ ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂದು ಆರೋಪಿಸಿದರು.
ಪ್ರತ್ಯೇಕ ರಾಜ್ಯಕ್ಕಾಗಿ ನಮ್ಮ ಹೋರಾಟ ನಿಲ್ಲುವುದಿಲ್ಲ.ನಮ್ಮ ಬೇಡಿಕೆ ಈಡೇರಿದ್ರೆ ಪ್ರತ್ಯೇಕ ರಾಜ್ಯದ ಹೋರಾಟ ಮಾಡುವ ಪ್ರಶ್ನೆ ಇರಲ್ಲ.ಸರ್ಕಾರ ಸಂವಿಧಾನ ಪ್ರಕಾರ ನಡೆಯುತ್ತಿಲ್ಲ.ಹೀಗಾಗಿ ಡಿಸಿಎಂ ಹುದ್ದೆ ರದ್ದು ಮಾಡಬೇಕು. ಇಲ್ಲವಾದರೆ ಸುವರ್ಣ ಸೌಧಕ್ಕೂ ಸಿಎಂ ನೇಮಕ ಮಾಡಲಿ ಎಂದರು.