ಶಿಕ್ಷಣದ ಬೆಳವಣಿಗೆಯೇ, ದೇಶದ ಅಭಿವೃದ್ಧಿಗೆ ಪೂರಕ : ಪ್ರಗತಿಗರ ರೈತ ಯಲ್ಲಪ್ಪ ಕೌಜಲಗಿ
ಗೋಕಾಕ : ಹಲವು ತ್ಯಾಗ ಬಲಿಧಾನಗಳ ನಂತರ ನಮ್ಮ ದೇಶಕ್ಕೆ ಸ್ವತಂತ್ರ್ಯ ದೊರೆತಿದೆ. ಸಿಕ್ಕ ಸ್ವತಂತ್ರ್ಯ ವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಂಡ ಹೊಗಬೇಕಾದರೆ, ದೇಶದ ಅಭಿವೃದ್ಧಿ ಹೊಂದಬೇಕಾದರೇ ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣದ ಬೆಳವಣಿಗೆಯೇ ದೇಶದ ಬೆಳವಣಿಗೆ ಎಂದು ತಳಕಟನಾಳ ಗ್ರಾಮದ ಪ್ರಗತಿಪರ ರೈತರಾದ ಯಲ್ಲಪ್ಪ ಕೌಜಲಗಿ ಅವರು ಹೇಳಿದರು.
78ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ಯ ಗೋಕಾಕ ತಾಲೂಕಿನ ತಳಕಟನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದವನ್ನು ನೆರವೇರಿಸಿ ಅವರು ಮಾತನಾಡಿದರು.
ದೇಶದ ಪ್ರಗತಿಗೆ ಶಿಕ್ಷಣವೇ ಮೂಲ. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಶಿಕ್ಷಣದಿಂದ ಸರ್ವವು ಸಾಧ್ಯ ಎಂದು ಯಲ್ಲಪ್ಪ ಕೌಜಲಗಿ ಅವರು ಹೇಳಿದರು.
*ಗಾಂಧಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ :*
ಸರ್ಕಾರಿ ಪ್ರಾಥಮಿಕ ಶಾಲೆ ಮುದ್ದು ವಿದ್ಯಾರ್ಥಿಗಳು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಭಾವಚಿತ್ರವನ್ನು ತಲೆಯ ಮೇಲೆ ಹೊತ್ತುಕೊಂಡು, ತಳಕಟನಾಳ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುತ್ತಾ ಪ್ರೌಢ ಶಾಲೆಯನ್ನು ತಲುಪಿ ಅಲ್ಲಿ ಧ್ವಜಾರೋಹಣ ಮಾಡಿ ನಂತರ ಗ್ರಾಮಪಂಚಾಯತಿ, ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯ ಮುಂದೆ ಧ್ವಜಾರೋಹಣ ಮಾಡಿ ನಂತರ ಪ್ರಾಥಮಿಕ ಶಾಲೆಯನ್ನು ತಲುಪಿದರು.
ಕಾರ್ಯಕ್ರಮದಲ್ಲಿ ಊರಿನ ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ತಳಕಟನಾಳ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಶಾಲೆ ಶಿಕ್ಷಕರು ಉಪಸ್ಥಿತರಿದ್ದರು.